SUDDIKSHANA KANNADA NEWS/ DAVANAGERE/ DATE:28-06-2024
ಹಾವೇರಿ: ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ
ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.