ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸ್ಪರ್ಧಾತ್ಮಕ ಪರೀಕ್ಷೆಗಳು: ಹಿಜಾಬ್ ಧರಿಸುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಬರಬೇಕು… ಯಾಕೆ ಗೊತ್ತಾ….?

On: October 25, 2023 12:50 PM
Follow Us:
---Advertisement---

SUDDIKSHANA KANNADA NEWS\ DATE:25-10-2023

ದಾವಣಗೆರೆ: ಹಿಜಾಬ್ ಧರಿಸುವ ಅಭ್ಯರ್ಥಿಗಳು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯದ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ತಪಾಸಣೆಗೆ ಒಳಪಡುವುದು ಕಡ್ಡಾಯ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಬ್ಲೂಟೂತ್ ಬಳಕೆ ಹೆಚ್ಚಿರುವುದರಿಂದ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಹಾಗೂ ಯಾವುದೇ ರೀತಿಯ ಫೇಸ್ ಮಾಸ್ಕ್ ವಸ್ತುಗಳೊಂದಿಗೆ ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದನ್ನು ನಿಷೇಧಿಸಿದೆ.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯನ್ನು ಪ್ರವೇಶಿಸುವ ಪೂರ್ವದಲ್ಲಿ ಪೂರ್ಣ ತೋಳಿನ ಅಂಗಿಯನ್ನು ಧರಿಸಬಾರದು ಅಥವಾ ಯಾವುದೇ ಆಭರಣಗಳನ್ನು ಧರಿಸಬಾರದು(ಮಂಗಳಸೂತ್ರವನ್ನು ಹೊರತುಪಡಿಸಿ). ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾದ ಡ್ರೆಸ್‍ಕೋಡ್‍ನ್ನು ಅಭ್ಯರ್ಥಿಗಳು ಅನುಸರಿಸಬೇಕು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅ.28 ಮತ್ತು 29 ರಂದು ವಿವಿಧ ಇಲಾಖೆಗಳ ಸ್ಮರ್ಧಾತ್ಮಕ ಪರೀಕ್ಷೆಗಳು ಜಿಲ್ಲೆಯ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ಕಲ್ಯಾಣ ಸಂಘಟಿಕರು, ಗ್ರೂಪ್-ಸಿ ಹುದ್ದೆಗೂ ಸಹ ಪ್ರಾಧಿಕಾರದಿಮದ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ದಿ: 28-10-2023 ರಂದು ನಗರದ 20 ಕೇಂದ್ರಗಳಲ್ಲಿ ಹಾಗೂ ದಿ: 29-10-2023 ರಂದು ಶಿವಮೊಗ್ಗ 24, ಭದ್ರಾವತಿ-06, ಸಾಗರ 02, ಶಿಕಾರಿಪುರ 03 ಸೇರಿದಂತೆ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಫಾಸಲೆಯವರೆಗೆ ಸಿಆರ್‍ಪಿಸಿ 1973 ರ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವ ಕುರಿತು ಹಾಗೂ ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವೇಶ ಟಿಕೆಟ್‍ನೊಂದಿಗೆ ಅಭ್ಯರ್ಥಿಯ ಜೊತೆಗೆ ವೋಟರ್ ಐಡಿ, ಬಸ್‍ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‍ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್‍ನಂತಹ ಯಾವುದೇ ಒಂದು ಮಾನ್ಯವಾದ ಗುರುತಿನ ಚೀಟಿಯನ್ನು ಹೊಂದಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 9449293450/ 9110642146 ನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment