SUDDIKSHANA KANNADA NEWS/ DAVANAGERE/ DATE:28-09-2024
ದಾವಣಗೆರೆ: ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 29 ರಂದು ಜಿಲ್ಲೆಯ 45 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಪರೀಕ್ಷಾ ಅವ್ಯವಹಾರ ತಡೆಗೆ ಹಾಗೂ ಸುಗಮ ಪರೀಕ್ಷೆಗಾಗಿ 144 ಸೆಕ್ಷನ್ ಜಾರಿಗೊಳಿಸಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಪರೀಕ್ಷೆಯು ದಾವಣಗೆರೆ 35, ಹೊನ್ನಾಳಿ 3, ಹರಿಹರ 4 ಹಾಗೂ ಜಗಳೂರಿನ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.