ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅವಧಿ ಮೀರಿದ ತಿಂಡಿ ಪದಾರ್ಥಗಳು ಇದ್ದರೆ ಮೊದಲು ಹೊರಹಾಕಿ- ಅಧಿಕಾರಿಗಳಿಗೆ ಸಿಎಂ ಸೂಚನೆ

On: June 19, 2024 5:29 PM
Follow Us:
---Advertisement---

ಬೆಂಗಳೂರು : ಅಂಗಡಿಗಳಲ್ಲಿ ಅವಧಿ ಮೀರಿದ ತಿಂಡಿ ಪದಾರ್ಥಗಳು ಇದ್ದರೆ ಮೊದಲು ಹೊರಹಾಕಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಇತ್ತೀಚೆಗೆ ಅಂಡಗಿಗಳಲ್ಲಿ ಅವಧಿ ಮೀರಿದ ಪದಾರ್ಥಗಳ ಮಾರಾಟ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. ಬಸ್‌ ನಿಲ್ದಾಣ, ವ್ಯಾಪಾರ ಮಳಿಗೆ ಹಾಗೂ ಆಹಾರ ಉದ್ಯಮಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಹೆಚ್ಚಾಗಿದ್ದು, ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

 

ಸಣ್ಣ ಪುಟ್ಟ ಅಂಗಡಿ, ಬೀದಿ ಬದಿ ಹಾಗೂ ವ್ಯಾಪಾರ ಮಳಿಗೆಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳು ಅವಧಿ ಮೀರಿದ ಪದಾರ್ಥಗಳು ಎನ್ನುವ ದೂರುಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿವೆ. ಇದನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಆದೇಶಿಸಿದ್ದಾರೆ.

 

ಹೀಗಾಗಿ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ ಎಂದು ತಿಳಿಸಿದೆ.

 

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.

Join WhatsApp

Join Now

Join Telegram

Join Now

Leave a Comment