Site icon Kannada News-suddikshana

ನಟ ದರ್ಶನ್ ಸಲ್ಲಿಸಿದ್ದ​ ರಿಟ್ ಅರ್ಜಿ ವಿಚಾರಣೆ ಜು.18 ಕ್ಕೆ ಮುಂದೂಡಿಕೆ..!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ನ್ಯಾ.ಎಸ್ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು.

ಈ ವೇಳೆ . ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದೆ. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು’ ಎಂದು ಅವರು ಹೇಳಿ ನಟ ದರ್ಶನ್ ರಿಟ್ ಅರ್ಜಿಯನ್ನು ಜುಲೈ 18 ಕ್ಕೆ ಹೈಕೋರ್ಟ್ ಮುಂದೂಡಿದೆ. ದರ್ಶನ್‌ ಪರ ವಕೀಲರು ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್‌ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಂಡಿಸಿದರು. ಸದ್ಯ ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದ್ದು, ಅಂದು ಅರ್ಜಿಯ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ಸಾಧ್ಯತೆ ಇದೆ.

 

Exit mobile version