SUDDIKSHANA KANNADA NEWS/ DAVANAGERE/ DATE:12-03-2024
ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ www.davangereuniversity.ac.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ವಿಶ್ವ ವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.
ಸಿಜಿ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ
ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ 108 ಅಂಬ್ಯುಲೆನ್ಸ್ ನ ಇಎಂಆರ್ ಐ ಗ್ರೀನ್ ಹೆಲ್ತ್ ಸರ್ವೀಸ್ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕ ವಿನಯ್ ಕುಮಾರ್ ಹಾಗೂ ಅಭಿಲಾಷ್ ಪಾಟೆಲ್ ಅವರು ಸಿಬ್ಬಂದಿಯೊಂದಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಮಹಿಳಾ ವೈದ್ಯರು, ಶೂಶ್ರೂಷಕರುಷಕರು ಹಾಗೂ ಮಹಿಳಾ ಸಿಬ್ಬಂದಿಗಳಿಗೆಳಿಗೆ ಶುಭಾಶಯಗಳನ್ನು ತಿಳಿಸಿದರು.