Site icon Kannada News-suddikshana

ವಿದ್ಯಾರ್ಥಿಗಳೇ ಗಮನಿಸಿ… ಆ. 31ರವರೆಗೆ ಅವಧಿ ವಿಸ್ತರಣೆ

SUDDIKSHANA KANNADA NEWS/ DAVANAGERE/ DATE:17-08-2024

ದಾವಣಗೆರೆ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಇ-ಸ್ಕಾಲರ್ ಶಿಪ್ ಪಡೆಯಲು ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ (ಮೆಟ್ರಿಕ್ ಪೂರ್ವ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ.ಪ್ರಕಾಶ್ ತಿಳಿಸಿದ್ದಾರೆ.

Exit mobile version