SUDDIKSHANA KANNADA NEWS/ DAVANAGERE/ DATE:29-08-2024
ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ನೀಡುವ ರಿಯಾಯಿತಿ ಪಡೆಯುವ ಕಾಲಾವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
ಶೈಕ್ಷಣಿಕ ಪುನಶ್ಚೇತನ ಕಾರ್ಯಾಗಾರ:
ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ಇವರ ಸಹಯೋಗದಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 9.30 ಕ್ಕೆ ನಗರದ ಮಾಗನೂರು ಬಸಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜು, ತರಳಬಾಳು ಬಡಾವಣೆ ಇಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಪುನಶ್ವೇತನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಎಸ್.ಬಿ. ಕಾರ್ಯಕ್ರಮ ಉದ್ಘಾಟಿಸಿ ಪ್ರತಿಭಾ ಪುರಸ್ಕಾರ ನೀಡುವರು. ಸಮಾಜ ಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಆರ್.ಸುರೇಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ಗೌರವ ಕಾರ್ಯದರ್ಶಿ ಶರಣ ಸಂಗಮೇಶ್ವರ ಗೌಡರು, ಜಿಲ್ಲಾ ಪದವಿ ಪೂರ್ವ ಕಾಲೇಜಿಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ರವಿ.ಸಿ.ಬಿ, ಭಾಗವಹಿಸುವರು. ವಿಶ್ವವಿದ್ಯಾನಿಲಯದ ಸಮಾಜ ಕಾರ್ಯವಿಭಾಗದ ಮುಖ್ಯಸ್ಥರಾದ ಡಾ.ಲೋಕೇಶ್ ಎಂ.ಯು., ಮಿತ್ರ ರಾಜ್ಯ ತರಬೇತುದಾರರ ಸಮೂಹದ ನಿರ್ದೇಶಕರಾದ ಸಿ.ಸಿ.ಪಾವಟೆ, ಕುಣಿಮೆಳ್ಳಿಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅರವಿಂದ ಆರ್.ಐರಣಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.