SUDDIKSHANA KANNADA NEWS/ DAVANAGERE/ DATE:12-01-2024
ದಾವಣಗೆರೆ: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸುವ ಅವಧಿಯನ್ನು ಜ.15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಹೆಚ್. ತಿಳಿಸಿದ್ದಾರೆ.
ಜೈನ್ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಶಾಮನೂರು ಬಳಿ ಇರುವ ಜೈನ್ ವಿದ್ಯಾಲಯ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ, ಯುವ ಜಾಗೃತಿ, ಅವರ ಬದುಕು ಭಾಷಣ, ಚಿಂತನೆಗಳ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಅನಿತಾ ರಜಪೂತ, ಮುಖ್ಯ ಶಿಕ್ಷಕರಾದ ಅಕ್ಕಮಹಾದೇವಿ, ಶಿಲ್ಪಾ, ಸಂಜೀವ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.