Site icon Kannada News-suddikshana

“ಹನಿ ರೋಸ್” ಗೆ ಸೋಷಿಯಲ್ ಮೀಡಿಯಾದಲ್ಲಿ ವಿಪರೀತ ಕೀಟಲೆ: 30ಜನರ ಮೇಲೆ ಕೇಸ್, ಓರ್ವನ ಬಂಧನ!

SUDDIKSHANA KANNADA NEWS/ DAVANAGERE/ DATE:07-01-2025

ಕೊಚ್ಚಿ: ನಟಿ ಹನಿ ರೋಸ್ ಗೆ ಕಾಟ ವಿಪರೀತ. ಮಲೆಯಾಳಂನ ಖ್ಯಾತ ನಟಿ ಹಿಂದೆ ದುಂಬಿಗಳು ಬಿದ್ದಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಕೊಚ್ಚಿ ಸೆಂಟ್ರಲ್ ಪೊಲೀಸರು ಈಗಾಗಲೇ 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಒಬ್ಬನನ್ನು ಬಂಧಿಸಿದ್ದಾರೆ.

ಈ ಪ್ರಕರಣ ಸಂಬಂಧ ಮಲಯಾಳಂ ನಟಿ ಹನಿ ರೋಸ್ ತನ್ನ ಸಾಮಾಜಿಕ ಜಾಲತಾಣ ಪುಟದಲ್ಲಿ ಅಶ್ಲೀಲ ಹೇಳಿಕೆಗಳ ವಿರುದ್ಧ ಇತ್ತೀಚೆಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆಕೆ ಹೇಳಿಕೆಯನ್ನು
ದಾಖಲಿಸಿಕೊಂಡಿದ್ದಾರೆ. ನಟಿ ಇಲ್ಲಿನ ಕೇಂದ್ರ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ನಮ್ಮ ತನಿಖೆಯನ್ನು ತೀವ್ರಗೊಳಿಸಿದ್ದೇವೆ. ಅಶ್ಲೀಲ ಪೋಸ್ಟ್ ಮಾಡಿದ ಅನೇಕರು ಈಗಾಗಲೇ ಅಳಿಸಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಹಿಂಪಡೆಯಲು ಮತ್ತು ಆರೋಪಿಗಳನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾನುವಾರ ರಾತ್ರಿ ನಟಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಂಧಿತ ವ್ಯಕ್ತಿಯನ್ನು ಸಮೀಪದ ಪಣಂಗಾಡು ಮೂಲದ 60 ವರ್ಷದ ಶಾಜಿ ಎಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 75 ಮತ್ತು ಸೆಕ್ಷನ್ 67 ಸೇರಿದಂತೆ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಮತ್ತು ಮಾಧ್ಯಮ ವೇದಿಕೆಗಳ ಮೂಲಕ ಲೈಂಗಿಕವಾಗಿ ಅನುಚಿತ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಪೋಸ್ಟ್‌ನ ಕೆಳಗೆ ಹಲವಾರು ಜನರು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ, ರೋಸ್ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತನ್ನ ಡ್ರೆಸ್ಸಿಂಗ್ ರೀತಿಯಲ್ಲಿ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡುವವರ ವಿರುದ್ಧ ರೋಸ್ ಸೋಮವಾರ ಹೊಸ ಸಾಮಾಜಿಕ ಮಾಧ್ಯಮ ಪೋಸ್ಟ್‌ನೊಂದಿಗೆ ಹೊರಬಂದಿದ್ದಾರೆ. ಹನಿ ರೋಸ್ ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ನಟಿಸಿದ್ದರೂ ಖ್ಯಾತಿ ಪಡೆದಿದ್ದಾರೆ.

Exit mobile version