SUDDIKSHANA KANNADA NEWS/DAVANAGERE/DATE:24_11_2025
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರು ಇಹಲೋಕ ತ್ಯಜಿಸಿದ್ದು, 89ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದಾರೆ.
READ ASLO THIS STORY: ಡಿ. ಕೆ. ಶಿವಕುಮಾರ್ ಸಿಎಂ ಪಟ್ಟಕ್ಕೆ ಗಟ್ಟಿಯಾಗುತ್ತಿದೆ “ಬಂಡೆ ಬೆಂಬಲಿಗರ ಬಣ”! ದೆಹಲಿಯಲ್ಲಿ ನಡೆಯುತ್ತಿದೆ ಕಾರ್ಯತಂತ್ರದ ರಹಸ್ಯ!
ಸುದ್ದಿ ಸಂಸ್ಥೆ ಐಎಎನ್ ಎಸ್ ಪ್ರಕಾರ ಹಿರಿಯ ನಟ ಧರ್ಮೇಂದ್ರ ತಮ್ಮ 89 ನೇ ವಯಸ್ಸಿನಲ್ಲಿ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದಾಗಿ ಅಕ್ಟೋಬರ್ ಅಂತ್ಯದಲ್ಲಿ ಅವರನ್ನು ದಾಖಲಿಸಲಾಗಿದ್ದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಬಿಡುಗಡೆಯಾದ 12 ದಿನಗಳ ನಂತರ ನಟ ವಿಧಿವಶರಾಗಿದ್ದಾರೆ. ಡಿಸೆಂಬರ್ 8 ರಂದು ಅವರಿಗೆ 90 ವರ್ಷ ತುಂಬುತ್ತಿತ್ತು.
1960 ರಲ್ಲಿ ದಿಲ್ ಭಿ ತೇರಾ ಹಮ್ ಭಿ ತೇರೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಧರ್ಮೇಂದ್ರ, 1960 ರ ದಶಕದಲ್ಲಿ ಅನ್ಪದ್, ಬಂದಿನಿ, ಅನುಪಮಾ ಮತ್ತು ಆಯಾ ಸಾವನ್ ಜೂಮ್ ಕೆ ಮುಂತಾದ ಚಿತ್ರಗಳಲ್ಲಿ ಸಾಮಾನ್ಯ ವ್ಯಕ್ತಿಯ ಪಾತ್ರಗಳಲ್ಲಿ ನಟಿಸುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
ನಂತರ ಅವರು ಶೋಲೆ, ಧರಮ್ ವೀರ್, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ಸಿನಿರಸಿಕರ ಮನ ಗೆದ್ದಿದ್ದರು.
ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿದ ತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾದಲ್ಲಿ ಧರ್ಮೇಂದ್ರ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರ ಮುಂದಾಳತ್ವದಲ್ಲಿ ಅವರ ಮುಂದಿನ ಸಿನಿಮಾ ಇಕ್ಕಿಸ್. ಚಿತ್ರ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ.
ಹಿರಿಯ ನಟ ಧರ್ಮೇಂದ್ರ ಅವರ ನಿಧನಕ್ಕೆ ಬಾಲಿವುಡ್ ನಟ ನಟಿಯರು, ನಿರ್ಮಾಪಕರು, ನಿರ್ದೇಶಕರು, ರಾಜಕಾರಣಿಗಳು ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ.






Leave a comment