Site icon Kannada News-suddikshana

ರೈತರಿಗೆ ಗುಡ್ ನ್ಯೂಸ್: 5 ಲಕ್ಷ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

(zero interest) ಕೃಷಿಕರಿಗೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಕೃಷಿಕರಿಗೆ ದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಅವರು ತಿಳಿಸಿದ್ದಾರೆ. 99 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಅವರು, ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪುಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ಪಾವಧಿ ಸಾಲ 5 ಲಕ್ಷ ರೂ., ಮಧ್ಯಮಾವಧಿ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ 15 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಕೊಡಗು ಜಿಲ್ಲೆಯ ಖಾಯಂ ನಿವಾಸಿಗಳ ಮಕ್ಕಳು ದೇಶ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಬ್ಯಾಂಕಿನಲ್ಲಿ ವಿದ್ಯಾ ಸಹಕಾರವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಗರಿಷ್ಠ 60 ಲಕ್ಷ ರೂ.ವರೆಗೆ ನೀಡಲಾಗುತ್ತಿದೆ ಎಂದರು.

Exit mobile version