7 ಜಿಲ್ಲೆಯಲ್ಲಿ ಕೃಷಿ ತರಬೇತಿ ಸ್ಥಾಪನೆ ಮಾಡಲಾಗುತ್ತದೆ ಎಂದು ರಾಜ್ಯದ ಜನತೆಗೆ ಕೃಷಿ ಸಚಿವರಿಂದ ಸಿಹಿಸುದ್ದಿ ಸಿಕ್ಕಿದೆ.
ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ ಸೇರಿದಂತೆ ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.