ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ: ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

On: January 4, 2025 7:21 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-01-2025

ದಾವಣಗೆರೆ: ಇ-ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ.

ರೈತರು ಗೂಗಲ್ ಪ್ಲೇ ಸ್ಟೋರ್‍ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2024-25 ಆ್ಯಪ್ ಡೌನ್ ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‍ಲೋಡ್ ಮಾಡಬೇಕು. ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ದಾಖಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಆಡಳಿತ ಅಧಿಕಾರಿ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಿಕೊಳ್ಳಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment