SUDDIKSHANA KANNADA NEWS/DAVANAGERE/DATE:22_12_2025
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೇ ರೈತರಿಗೆ ಕಂಟಕ ಎದುರಾಗಿದೆ. ಉತ್ತರ ಕರ್ನಾಟಕ ಭಾಗದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ನಾಯಕರು ಉತ್ತರ ಕರ್ನಾಟಕದವರ ಸಮಸ್ಯೆಗಳಿಗೆ ಮಾತ್ರ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.
ಕಾಂಗ್ರೆಸ್ ಅವಧಿಯಲ್ಲಿ ರಾಜ್ಯದಲ್ಲಿ 2809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಆತ್ಮಹತ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕಿತ್ತೂರು ಕರ್ನಾಟಕದ ಹಾವೇರಿ, ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದಲ್ಲಿ ಸುಮಾರು 1974 ಪ್ರಕರಣಗಳು ದಾಖಲಾಗಿವೆ. ಇದೊಂದು ರೀತಿಯಲ್ಲಿ ಅಘೋಷಿತ ಆತ್ಮಹತ್ಯೆ ಗ್ಯಾರಂಟಿ ಜಾರಿಯಲ್ಲಿದೆಯೇ ಎನ್ನುವ ಸಂಶಯ ಮೂಡಿಸುತ್ತಿದೆ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.





Leave a comment