ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವ ಸಣ್ಣ ಪ್ರಮಾಣದ ರೈತರಿಗೆ ಪ್ರೋತ್ಸಾಹ ನೀಡುವ ಸಂಬಂಧ ಸರ್ಕಾರವು ರೈತ ಸಿರಿ ಯೋಜನೆ ಜಾರಿಗೆ ತಂದಿದೆ.
ಈ ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜ&ರಸಗೊಬ್ಬ ಖರೀದಿಗೆ ಸರ್ಕಾರದಿಂದ 10,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಆಧಾರ್ ಕಾರ್ಡ್ ಸೇರಿದಂತೆ ರೈತರು ಎನ್ನುವುದನ್ನು ದೃಢೀಕರಿಸುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ https:// raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು.