ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆ ವಿದ್ಯುತ್ ಸರಬರಾಜು: ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್

On: October 26, 2023 12:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-10-2023

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮತ್ತು ಶಾಸಕರು ಹಾಗೂ ರೈತ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಿ ರೈತರಿಗೆ ಕೃಷಿಗಾಗಿ ದಿನದಲ್ಲಿ 5 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಬಿ.ಎಸ್.ಜಗದೀಶ್ ತಿಳಿಸಿದ್ದಾರೆ.

ಐದು ಗಂಟೆಯಲ್ಲಿ ಹಗಲು ವೇಳೆ 3 ಗಂಟೆ ಮತ್ತು ರಾತ್ರಿ ವೇಳೆ 2 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 361 ಕೃಷಿ ಪಂಪ್‍ಸೆಟ್ ಮಾರ್ಗಗಳಿರುತ್ತವೆ.

ಭಾವಚಿತ್ರವಿರುವ ಕರಡು ಮತದಾರರ ಕರಡು ಪಟ್ಟಿ ಬಿಡುಗಡೆ:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ
ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ.

ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ತಾಲ್ಲೂಕು ಕಚೇರಿ, ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಇದಲ್ಲದೇ 1950 ಕ್ಕೆ ಕರೆ ಮಾಡಬಹುದಾಗಿದೆ. ವಿಹೆಚ್‍ಎ ಆಪ್, www.nvsp.in, http;//ceo.karnataka.gov.in ವೆಬ್‍ಸೈಟ್‍ಗಳಲ್ಲಿ ಪರಿಶೀಲಿಸಬಹುದಾಗಿದೆ.

ಕರಡು ಮತದಾರರ ಪಟ್ಟಿಯಲ್ಲಿನ ದೋಷವಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು 2023 ರ ಡಿಸೆಂಬರ್ 26 ರವರೆಗೆ ಅವಕಾಶ ಇರುತ್ತದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment