ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿಗೆ ಲಗ್ಗೆ: ಮೈಕೊರೆಯುವ ಚಳಿಯಲ್ಲೂ ಹೋರಾಟದ ಕಿಚ್ಚು!

On: February 3, 2025 8:54 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-02-2025

ದಾವಣಗೆರೆ: ಗೌರವ ಧನ ಹೆಚ್ಚಳ ಮತ್ತು ಆರನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ಸಂಘಟನೆಯಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಮುಂದುವರಿದಿದೆ.

ಸತ್ಯಾಗ್ರಹ ಚಳುವಳಿಯಲ್ಲಿ ದಾವಣಗೆರೆ ಜಿಲ್ಲೆಯಿಂದಲೂ ಸುಮಾರು 2000 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ರಾಜ್ಯ ಕಾರ್ಯದರ್ಶಿ ಅವರಗೆರೆ ಚಂದ್ರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ ಅವರ ನೇತೃತ್ವದಲ್ಲಿ ಭಾಗವಹಿಸಿ ಹೋರಾಟಕ್ಕೆ ಬಲ ತುಂಬಿದರು.

ಗೌರವ ಧನ ಹೆಚ್ಚಿಸುವುದು ಸೇರಿದಂತೆ ತಮ್ಮ ಇತರ ಬೇಡಿಕೆಗಳಾದ ಸುಪ್ರೀ ಕೋರ್ಟ್ ತೀರ್ಪಿನಂತೆ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡಬೇಕು, ಗುಜರಾತ್ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡಿರುವ ನಿರ್ದೇಶನದಂತೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸೇವೆಯನ್ನು ‘ನಾಗರಿಕ ಸೇವೆ’ ಎಂಬುದಾಗಿ ಪರಿಗಣಿಸಿ ಕನಿಷ್ಠ ವೇತನ ನಿಗದಿಪಡಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆಯುತ್ತಿದೆ.

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಕನಿಷ್ಠ ವೇತನ ನಿಗದಿಪಡಿಸಬೇಕು, ರಾಜ್ಯ ಸರಕಾರದ ಆರನೇ ಗ್ಯಾರಂಟಿಯಾಗಿ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕಾರ್ಯಕರ್ತೆಯರಿಗೆ ಮಾಸಿಕ ರೂ‌.15000 ಮತ್ತು ಸಹಾಯಕಿಯರಿಗೆ ಮಾಸಿಕ ರೂ 10000 ಗೌರವಧನ ನೀಡಬೇಕು, ಗ್ರಾಚ್ಯುಟಿ ಸೌಲಭ್ಯ ಜಾರಿಗೊಳಿಸಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕ್ರಮವಾಗಿ ‘ಸಿ’ ಮತ್ತು ‘ಡಿ’ ದರ್ಜೆ ನೌಕರರ ಸ್ಥಾನಮಾನ ನೀಡಬೇಕು ಎಂದು ಹೋರಾಟಗಾರರು ಸರಕಾರವನ್ನು ಆಗ್ರಹಿಸಿದರು.

ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್, ಅಂಗನವಾಡಿ ಪೆಡರೇಶನ್‌ನ ರಾಜ್ಯಾಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ ಮತ್ತಿತರರು ಹೋರಾಟದ ಮುಂದಾಳತ್ವವನ್ನು ವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment