SUDDIKSHANA KANNADA NEWS/ DAVANAGERE/ DATE-31-05-2025
ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.