Home ದಾವಣಗೆರೆ ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿ ಪಾರದರ್ಶಕತೆಗೆ ಒತ್ತು: ಸಿಎಂ ಡಿ ಕೆ ಶಿವಕುಮಾರ್!
ದಾವಣಗೆರೆಉದ್ಯೋಗ ವಾರ್ತೆನವದೆಹಲಿಬೆಂಗಳೂರು

ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ, ನೇಮಕಾತಿಯಲ್ಲಿ ಪಾರದರ್ಶಕತೆಗೆ ಒತ್ತು: ಸಿಎಂ ಡಿ ಕೆ ಶಿವಕುಮಾರ್!

Share
ಡಿ ಕೆ ಶಿವಕುಮಾರ್
Share

ಬೆಂಗಳೂರು: “ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ನೇಮಕಾತಿಯಲ್ಲಿ ಪಾರದರ್ಶಕತೆ ತರಬೇಕಿದೆ. ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗಿದ್ದೇವೆ. ಯುವ ಜನಾಂಗ ರಾಜ್ಯಕ್ಕೆ ಶಕ್ತಿ ತುಂಬಲಿದೆ. ಹೀಗಾಗಿ ನಾವು ಯುವಕರಿಗೆ ಮಾತ್ರ ನೀಡಬೇಕು. ಯುವ ಕರ್ನಾಟಕದ ಮೂಲಕ ಭಾರತ ನಿರ್ಮಾಣ ಮಾಡಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಜ್ಞಾನವೇ ಪ್ರಗತಿಯ ಮೂಲ ಯುವ ಕರ್ನಾಟಕ ನವ ಭಾರತ. ನಂಬಿಕೆ ದೊಡ್ಡ ಶಕ್ತಿ. ಈ ಪಕ್ಷದಲ್ಲಿ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಯಾರು ಇರ್ತಾರೆ ಎಂಬುದು ಮುಖ್ಯವಲ್ಲ, ನಮ್ಮ ಹೆಗಲ ಮೇಲೆ ರಾಷ್ಟ್ರಧ್ವಜ ಉಳಿಸಿಕೊಳ್ಳುವುದು ಮುಖ್ಯ. ನಾವು ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಡಿದ್ದೆವು. ಈಗ ಪಂಚಾಯ್ತಿ ಮಟ್ಟದಲ್ಲಿ ಆರು ಜನರ ಸಮಿತಿ ಮಾಡಲು ತೀರ್ಮಾನಿಸಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಮಲ ಕೆರೆಯಲ್ಲಿದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ. ಈ ಕೈ ಅಧಿಕಾರದಲ್ಲಿದ್ದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

1.21 ಕೋಟಿ ಮಹಿಳೆಯರಿಗೆ ಮಾಸಿಕ 2 ಸಾವಿರ, 1.61 ಮನೆಗಳಿಗೆ 200 ಯೂನಿಟ್ ವಿದ್ಯುತ್ ಉಚಿತ, 4 ಕೋಟಿಗೂ ಹೆಚ್ಚು ಜನರಿಗೆ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ. ರಾಜ್ಯದ ಮಹಿಳೆಯರಿಗೆ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮ ಇಂದು ದೇಶದ ಕಾರ್ಯಕ್ರಮವಾಗಿದೆ” ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *