Site icon Kannada News-suddikshana

ಬೆದರಿಕೆ ಆರೋಪ: BJP ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ 2 ಪ್ರಕರಣ ದಾಖಲಾಗಿರುತ್ತವೆ.

ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಅವರು ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶಾಸಕ ಮುನಿರತ್ನ ಅವರು ಸೆಪ್ಟೆಂಬರ್ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿಯೂ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪ ಮಾಡಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Exit mobile version