ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Bangalore: ಪಟಾಕಿ ಗೋದಾಮಿಯಲ್ಲಿ ಅಗ್ನಿ ಅವಘಡ: ಧಗಧಗಿಸಿ ಹೊತ್ತಿ ಉರಿದ ಬೆಂಕಿಯಲ್ಲಿ 14 ಮಂದಿ ಸಜೀವ ದಹನ

On: October 8, 2023 3:51 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE: 08-10-2023

ಬೆಂಗಳೂರು (Bangalore): ಪಟಾಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅಗ್ನಿ ಅನಾಹುತದಲ್ಲಿ 14 ಮಂದಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮೃತಪಟ್ಟವರು ಹೆಚ್ಚಿನ ತಮಿಳುನಾಡಿನವರು ಎಂದು ಗುರುತಿಸಲಾಗಿದೆ. ಆದ್ರೆ, ಇದು ಇನ್ನೂ ಸ್ಪಷ್ಟವಾಗಿಲ್ಲ.

ಈ ಸುದ್ದಿಯನ್ನೂ ಓದಿ:

Davanagere: ಸುಳ್ಳು ವಿಳಾಸ ನೀಡಿ ಹೆಸರು ಬದಲಿಸಿ, 44.5 ಲಕ್ಷ ರೂ. ವಂಚಿಸಿದ್ದ ಆರೋಪಿಗಳು ದೇವರಿಗೆ ಖರ್ಚು ಮಾಡಿದ್ದೆಷ್ಟು ಗೊತ್ತಾ…?

ಅಂಗಡಿ ಮಾಲೀಕನ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಗಡಿ ಮಾಲೀಕ ಸೇರಿದಂತೆ ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಆದರೆ, ಅವರಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು
ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪಟಾಕಿ ಗೋಡೌನ್-ಕಮ್-ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಾಗಿದ್ದು, ಮೃತರ ಗುರುತನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯಿಂದ ಪಟಾಕಿ ಪೆಟ್ಟಿಗೆಗಳನ್ನು ಇಳಿಸುವಾಗ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಅಗ್ನಿಶಾಮಕ ದಳದವರು ಸ್ಥಳದಲ್ಲಿ ಹೆಚ್ಚಿನ ಶವಗಳಿವೆಯೇ ಎಂದು ಖಚಿತಪಡಿಸಿಕೊಳ್ಳಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸ್ಥಳದಿಂದ ಇದುವರೆಗೆ 14 ಸುಟ್ಟ ದೇಹಗಳನ್ನು ಹೊರತೆಗೆದಿದೆ. ಈ ಎಲ್ಲ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸುಟ್ಟು ಕರಕಲಾದ ಅಂಗಡಿಯೊಳಗೆ ಹೆಚ್ಚಿನ ಶವಗಳಿವೆಯೇ ಎಂದು ಖಚಿತಪಡಿಸಿಕೊಳ್ಳಲು ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಬೆಂಗಳೂರು ಗ್ರಾಮಾಂತರ) ಮಲ್ಲಿಕಾರ್ಜುನ ಬಲದಂಡಿ ತಿಳಿಸಿದ್ದಾರೆ.

ಐದಕ್ಕೂ ಹೆಚ್ಚು ಅಗ್ನಿಶಾಮಕ ಇಂಜಿನ್‌ಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಬೆಂಕಿ ಸಂಪೂರ್ಣ ನಂದಿಸಲಾಗಿದೆ ಎಂದು ಅವರು ಹೇಳಿದರು.

ಬೆಂಕಿ ಹೊತ್ತಿಕೊಂಡಾಗ ಅಂಗಡಿಯಲ್ಲಿ ಸುಮಾರು 12 ರಿಂದ 15 ಮಂದಿ ಕೆಲಸ ಮಾಡುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (ಎಫ್‌ಎಸ್‌ಎಲ್) ತಂಡದ ತಜ್ಞರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಗೆ ನಿಖರವಾದ ಕಾರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

“ಘಟನೆಯ ಸಮಯದಲ್ಲಿ ಅಂಗಡಿಯೊಳಗೆ ಇದ್ದ ಜನರ ನಿಖರವಾದ ಸಂಖ್ಯೆಯ ಬಗ್ಗೆ ಗಾಯಾಳುಗಳು ಮತ್ತು ನೌಕರರ ಕುಟುಂಬ ಸದಸ್ಯರಿಂದ ನಾವು ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ. ಮೃತದೇಹಗಳನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ನಾವು ಹೆಚ್ಚಿನ ಶವಗಳನ್ನು ಹೊರತೆಗೆಯುವ ಸಾಧ್ಯತೆಗಳಿವೆ, ”ಎಂದು ಅವರು ಹೇಳಿದರು.

ಮುಂಬರುವ ದೀಪಾವಳಿ ಹಬ್ಬಕ್ಕಾಗಿ ಗೋಡೌನ್‌ನಲ್ಲಿ ಲಕ್ಷಾಂತರ ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಸ್ಫೋಟಗೊಳ್ಳಲು ಆರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿಯ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ
ತುಂಬಾ ದುಃಖವಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment