ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಕಾಯಿಪೇಟೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ತಾಯಿ – ಮಗ ಸಾವು, ನಾಲ್ವರಿಗೆ ಗಾಯ!

On: July 1, 2025 1:05 PM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/ DAVANAGERE/ DATE-01-07-2025

ದಾವಣಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ತಾಯಿ ಮಗ ಸಾವನ್ನಪ್ಪಿದ ದಾರುಣ ಘಟನೆ ನಗರದ ಹಳೇದಾವಣಗೆರೆಯ ಮಂಡಿಪೇಟೆ ಇಂದು ಬೆಳಿಗ್ಗೆ ನಡೆದಿದೆ.

READ ALSO THIS STORY: ಮಣಿಪಾಲ ಆರೋಗ್ಯ ಕಾರ್ಡ್‌ 2025 ರ ನೋಂದಣಿ ಪ್ರಾರಂಭ: ರಿಯಾಯಿತಿ ಪ್ರಯೋಜನಗಳ ಸಂಪೂರ್ಣ ಮಾಹಿತಿ

ಬಿಜೆಪಿ ಮುಖಂಡ ಹೆಚ್. ಎಂ. ರುದ್ರಮುನಿ ಸ್ವಾಮಿ ಎಂಬುವವರಿಗೆ ಸೇರಿದ ಮನೆಯಲ್ಲಿ ವಾಸವಿದ್ದ ಕಾಯಿಪೇಟೆ ನಿವಾಸಿ ವಿಮಲಾ (75) ಹಾಗೂ ಪುತ್ರ ಕುಮಾರ (35) ಸಾವನ್ನಪ್ಪಿದ ದುರ್ದೈವಿಗಳು. ಕುಟುಂಬದ ನಾಲ್ವರು ಮನೆಯಲ್ಲಿದ್ದು,
ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬೆಳಿಗ್ಗೆ ನಾಲ್ಕು ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಆರು ಜನರ ಪೈಕಿ ನಾಲ್ವರು ಹೊರಗೆ ಓಡೋಡಿ ಬಂದಿದ್ದಾರೆ. ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ತಾಯಿ ಮತ್ತು ಮಗ ಹೊರ ಬರಲು ಸಾಧ್ಯವಾಗಿಲ್ಲ. ಉಸಿರುಗಟ್ಟಿ ತೀವ್ರ ಅಸ್ವಸ್ಥಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಸವನಗರ ಪೊಲೀಸ್ ಠಾಣೆಯ ಸಿಬ್ಬಂದಿ, ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಕೊಠಡಿಯಲ್ಲಿದ್ದ ತಾಯಿ ಮತ್ತು ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment