SUDDIKSHANA KANNADA NEWS/ DAVANAGERE/ DATE:09-09-2023
SUDDIKSHANA KANNADA NEWS/ DAVANAGERE/ DATE:09-09-2023
ಬೆಂಗಳೂರು: ಕಳೆದೊಂದು ತಿಂಗಳಿನಿಂದ ಶಾಂತವಾಗಿದ್ದ ಮಳೆ (Rain)ಮತ್ತೆ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ. ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದ್ದು, ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ (Rain) ಆಗುವುದಾಗಿ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಇಂದಿನಿಂದ ಐದು ದಿನಗಳ ಕಾಲ ಸತತವಾಗಿ ಮಳೆ (Rain) ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆ (Rain) ಅಬ್ಬರಿಸಿ ಬೊಬ್ಬಿರಿಯಲಿದೆ.
ಈ ಸುದ್ದಿಯನ್ನೂ ಓದಿ:
ಗುಡುಗು, ಸಿಡಿಲು ಸಮೇತ ಮಳೆ (Rain) ಸುರಿಯುವುದಾಗಿ ಹೇಳಿರುವ ಹವಾಮಾನ ಇಲಾಖೆಯು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರ್ಷಧಾರೆಯಾಗಲಿದೆ ಎಂದು ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೃಷ್ಣನ ನಗರಿ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆ(Rain)ಯಾಗುವ ಸೂಚನೆ ಕೊಡಲಾಗಿದೆ. ದಕ್ಷಿಣ ಕನ್ನಡ, ಉತ್ತರಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.