Home ದಾವಣಗೆರೆ ಶೀಘ್ರದಲ್ಲೇ ಇ-ಸ್ವತ್ತು ತಂತ್ರಾಶದಲ್ಲಿನ ಕೆಲ ದೋಷ ಪರಿಹರಿಸಿ: ಸಿಇಒಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ
ದಾವಣಗೆರೆನವದೆಹಲಿಬೆಂಗಳೂರು

ಶೀಘ್ರದಲ್ಲೇ ಇ-ಸ್ವತ್ತು ತಂತ್ರಾಶದಲ್ಲಿನ ಕೆಲ ದೋಷ ಪರಿಹರಿಸಿ: ಸಿಇಒಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Share
Share

ಬೆಂಗಳೂರು: ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು, ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯದ ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಭೆ ನಡೆಸಿದರು.

ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಬಗೆಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಸಿಇಒಗಳೊಂದಿಗೆ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ನಿರ್ದೇಶಿಸಲಾಗಿದೆ. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇ-ಸ್ವತ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.ಇ-ಸ್ವತ್ತು ಬಗ್ಗೆ ಬರುವ ಯಾವುದೇ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕೆಂದು ನಿರ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

Share

Leave a comment

Leave a Reply

Your email address will not be published. Required fields are marked *