Home ದಾವಣಗೆರೆ ಬಳ್ಳಾರಿಯಲ್ಲಿ ಭರತ್ ರೆಡ್ಡಿ, ಜನಾರ್ದನ ರೆಡ್ಡಿ ಫ್ಲೆಕ್ಸ್ ಫೈಟ್ ತಾರಕಕ್ಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ದಾವಣಗೆರೆನವದೆಹಲಿಬೆಂಗಳೂರು

ಬಳ್ಳಾರಿಯಲ್ಲಿ ಭರತ್ ರೆಡ್ಡಿ, ಜನಾರ್ದನ ರೆಡ್ಡಿ ಫ್ಲೆಕ್ಸ್ ಫೈಟ್ ತಾರಕಕ್ಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share
Share

ಮೈಸೂರು: ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ

ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.

ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು.

ಬಲೂನ್ ಸ್ಪೋಟ ಪ್ರಕರಣ- ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರ

ಮೈಸೂರಿನ ಅರಮನೆಯ ಮುಂಭಾಗದಲ್ಲಿ ಬಲೂನ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದರು.

Share

Leave a comment

Leave a Reply

Your email address will not be published. Required fields are marked *