ವಾಷಿಂಗ್ಟನ್ / ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ಚಾಕು ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದರೂ, ವಿಮಾನ ಪತನವಾಗದಂತೆ ತಡೆದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ರಿಯಲ್ ಹೀರೋ” (ಸಾಹಸಿ) ಎಂದು ಶ್ಲಾಘಿಸಿದ್ದಾರೆ. ಮಾತ್ರವಲ್ಲ, ವಿಶ್ವದೆಲ್ಲೆಡೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬಂದಿದೆ.
ಘಟನೆಯ ವಿವರ:
ಫ್ಲೈದುಬೈ FZ1073 ವಿಮಾನವು 174 ಪ್ರಯಾಣಿಕರೊಂದಿಗೆ ಸಾಗುತ್ತಿದ್ದಾಗ ಒಮಾನ್ ಮೂಲದ ಸಹ-ಪೈಲಟ್ ಏಕಾಏಕಿ ಕ್ಯಾಪ್ಟನ್ ಸ್ಮಿತ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದನು. ತೀವ್ರ ರಕ್ತಸ್ರಾವವಾಗುತ್ತಿದ್ದರೂ ಧೈರ್ಯಗುಂದದ ಸ್ಮಿತ್, ಕಾಕ್‌ಪಿಟ್ ಬಾಗಿಲನ್ನು ತೆರೆದು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರು.
ಕೂಡಲೇ ವಿಮಾನದಲ್ಲಿದ್ದ ಇಸ್ರೇಲಿ ಪ್ರಯಾಣಿಕರೊಬ್ಬರು ಹಾಗೂ ಸಿಬ್ಬಂದಿ ಕಾಕ್‌ಪಿಟ್‌ಗೆ ನುಗ್ಗಿ ಸಹ-ಪೈಲಟ್‌ನನ್ನು ವಶಕ್ಕೆ ಪಡೆದರು. ನಂತರ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ (Emergency Landing) ಮಾಡಿಸಲಾಯಿತು.





Leave a comment