SUDDIKSHANA KANNADA NEWS/ DAVANAGERE/ DATE:27-02-2025
ದಾವಣಗೆರೆ: ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್ ವಿಚಾರ ಸಂಬಂಧ ಸರ್ಕಾರದ ಸುತ್ತೋಲೆ ಅನುಸರಿಸಬೇಕು. ಸಿಸಿ ಕ್ಯಾಮೆರಾ ಅಳವಡಿಸುವಂತೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಸಿಬ್ಬಂದಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸಬೇಕು. ಹಿಜಾಬ್ ಸಂಬಂಧ ಸರ್ಕಾರದ ಸುತ್ತೋಲೇಯನ್ನು ಅನುಸರಿಸಬೇಕು. ಪ್ರತಿ ಶಾಲೆಯಲ್ಲೂ ಸಿಸಿ ಕ್ಯಾಮಾರಾ ಅಳವಡಿಸಬೇಕು. ಸಿಬ್ಬಂದಿಗಳು ಕೂಡ ಪರೀಕ್ಷಾ ಕೊಠಡಿಗಳಿಗೆ ಮೊಬೈಲ್ ತೆಗೆದುಕೊಂಡು ಹೋಗುವ ಆಗಿಲ್ಲ.
ಕೊಠಡಿಗಳಲ್ಲಿ ಗಡಿಯಾರಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಒಳಗಡೆ ಕಾಣುವಂತ ನೀರಿನ ಬಾಟೆಲ್‌ಗಳನ್ನು ತೆಗೆದುಕೊಂಡು ಬರಲು ಮಾತ್ರ ಅವಕಾಶ ಕೊಡಬೇಕು. ಕೊಠಡಿಯಲ್ಲಿ ನೀರು, ಬೆಳಕಿನ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು.
ಪರೀಕ್ಷೆ ಜಿಲ್ಲೆಯ 22579 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅತಿಯಾದ ಆತ್ಮವಿಶ್ವಾಸ ಬೇಡ, ಪರೀಕ್ಷೆಗಳ ಆರಂಭದಿಂದ ಅಂತ್ಯದವರೆಗೂ ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸಬೇಕು. ಈ ಹಿಂದಿನ ಎಲ್ಲಾ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿದ ಹೆಗ್ಗಳಿಕೆ ನಮ್ಮ ಜಿಲ್ಲೆಗಿದೆ. ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆ ಸುವ್ಯವಸ್ಥೆ ನಡೆಯುವಂತೆ ನೋಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಘೋಷಣೆ ಜಾರಿ ಮಾಡಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಅಂತರದಲ್ಲಿರುವ ಝರಾಕ್ಸ್ ಅಂಗಡಿಗಳನ್ನು ತೆರಯುವಂತಿಲ್ಲ. ಜಿಲ್ಲಾ ಹಂತದಲ್ಲಿ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ ಪೊಲೀಸರನ್ನು ನೇಮಕಗೊಳಿಸಲಾಗುತ್ತದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ, ಮಾಹಿತಿಗಳನ್ನು ಯಾರೂ ಕೂಡ ಪ್ರಕಟಿಸಬಾರದು. ಒಂದು ವೇಳೆ ಪ್ರಕಟಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.
ಡಿ.ಡಿಪಿ.ಐ ಕೊಟ್ರೇಶ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 22579 ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 81 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಪರೀಕ್ಷೆ ನಡೆಯಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಎಲ್ಲಾ ಮುಂಜಾಗೃತ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ ಉಪಕಾರ್ಯದರ್ಶಿ ಕೃಷ್ಣನಾಯ್ಕ, ಡಯಟ್ ಪ್ರಾಂಶುಪಾಲರಾದ ಗೀತಾ, ಡಿಡಿಪಿಯು ಕರಿಬಸಪ್ಪ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.