SUDDIKSHANA KANNADA NEWS/ DAVANAGERE/ DATE:06-03-2025
ದಾವಣಗೆರೆ: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿಯೂ ಭ್ರಷ್ಟ ಅಧಿಕಾರಿ ಮನೆ ಮತ್ತು ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದು, ಈ ವೇಳೆ ಚಿನ್ನ, ಬೆಳ್ಳಿ, ನಗದು ಸಹ ಪತ್ತೆಯಾಗಿದೆ.
ದಾವಣಗೆರೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದು, ಆಹಾರ ಸುರಕ್ಷತಾ ಅಧಿಕಾರಿ ಡಾ. ನಾಗರಾಜ್ ಮನೆ ಮೇಲೆ ರೈಡ್ ಆಗಿದೆ. ಡಾ. ನಾಗರಾಜ್ ಮನೆ ಹಾಗೂ ಕಚೇರಿಯ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಭವನದ ಬಳಿ ಇರುವ ಡಾ.ನಾಗರಾಜ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆಸ್ತಿ ಪತ್ರಗಳು ಸಹ ದೊರೆತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ. ಎಸ್. ಕೌಲಾಪುರೆ ಹಾಗು ಇನ್ಸ್ ಪೆಕ್ಟರ್ ಪ್ರಭು ನೇತೃತ್ವದಲ್ಲಿ ದಾಳಿ ನಡೆದಿದ್ದು, ಭ್ರಷ್ಟ ಅಧಿಕಾರಿ ಮನೆಯಲ್ಲಿ ಇನ್ನೂ ಶೋಧ ಮುಂದುವರಿದಿದೆ.