SUDDIKSHANA KANNADA NEWS/ DAVANAGERE/ DATE:08-03-2024
ದಾವಣಗೆರೆ: ನಗರದ ಜಿ.ಎಂ.ಐ.ಟಿ. ಅತಿಥಿ ಗೃಹದಲ್ಲಿ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ಮಂಟೂರು ಗ್ರಾಮದ ಯುವಕ ಭರತ ಸವಣೂರು ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸೈಕಲ್ ಜಾಥಾ ನಡೆಸುತ್ತಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳ ಕುರಿತು ಮಾಹಿತಿ ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಮಂತ್ರಿ ಮಾಡಲು ಭಾರತ್ ಬಚಾವ್-ವೋಟ್ ಫಾರ್ ಬಿ.ಜೆ.ಪಿ. ಸೈಕಲ್ ಜಾಥಾ ಕೈಗೊಂಡಿದ್ದಾನೆ.
ಇಂದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ಈತನನ್ನು ದಾವಣಗೆರೆ ಲೋಕಸಭಾ ಸದಸ್ಯ ಡಾ. ಜಿ.ಎಂ. ಸಿದ್ದೇಶ್ವರ ಅವರು ಸನ್ಮಾನ ಮಾಡುವ ಮೂಲಕ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.
ಈ ಸಂಧರ್ಭದಲ್ಲಿ ಮೋದಿ ಪಡೆಯ ಜಿಲ್ಲಾ ಸಂಚಾಲಕರಾದ ಸುಧೀಂದ್ರ ಕುಮಾರ್, ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯರಾದ ವಿಜಯೇಂದ್ರ ಡಿ.ಟಿ., ಮಂಜುನಾಥ್, ಸುರಜ್ ಬಿ.ಎಸ್., ಸಂದೀಪ್ ಜೈನ್, ರಮೇಶ್ ಎನ್.ಇ. ಹಾಗೂ ಇತರರು ಭಾಗವಹಿಸಿದ್ದರು.