SUDDIKSHANA KANNADA NEWS/ DAVANAGERE/ DATE:15-03-2024
ಬೆಂಗಳೂರು: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇಸ್ ದಾಖಲಾಗಿದೆ. ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಎಫ್ ಐ ಆರ್ ನಲ್ಲಿ ಸಂತ್ರಸ್ತೆ ತಾಯಿ ಆರೋಪಿಸಿದ್ದಾಳೆ.
ಈ ಹಿಂದೆ ಇದೇ ಮಹಿಳೆ 53 ಮಂದಿ ವಿರುದ್ಧ ದೂರು ದಾಖಲಿಸಿದ್ದು ಅನುಮಾನಾಸ್ಪದಕ್ಕೆ ಕಾರಣವಾಗಿದೆ. ರಾಜಕಾರಣಿಗಳು, ಉದ್ಯಮಿಗಳು ಹಾಗೂ ರಾಜಕಾರಣಿ ಸೇರಿದಂತೆ 53 ಮಂದಿ ವಿರುದ್ಧ ಸಂತ್ರಸ್ತೆ ಯಾತಿಯು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ
ತಂದೊಡ್ಡುವ ಸಾಧ್ಯತೆ ಇದೆ. ಈ ಮಧ್ಯೆ ಪತ್ರಿಕಾಗೋಷ್ಠಿಯನ್ನು ಯಡಿಯೂರಪ್ಪ ಅವರು ಕರೆದಿದ್ದು, ಸ್ಪಷ್ಟನೆ ನೀಡಲಿದ್ದಾರೆ.