ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಜೆಪಿ ಬೇಗುದಿ ತಾರಕಕ್ಕೆ: ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಕ್ಕೆ ಮಾಜಿ ಸಿಎಂ ಬೇಸರ!

On: February 6, 2025 12:38 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-02-2025

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌.

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌ ಎಂದು ಹೇಳಿದ್ದಾರೆ.

ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment