ದೆಹಲಿಯ ಪ್ರತಿ ದೇವಸ್ಥಾನಗಳಲ್ಲಿನ ಅರ್ಚಕರಿಗೆ ತಿಂಗಳಿಗೆ 18000 ಸಾವಿರ ಸಹಾಯಧನ ನೀಡುವುದಾಗಿ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳನ್ನು ಗೆಲ್ಲಲು ಹಲವಾರು ತಂತ್ರಗಳನ್ನು ರೂಪಿಸಿಕೊಂಡಿರುವ ಅರವಿಂದ್ ಕೇಜ್ರಿವಾಲ್ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಹಿಂದೂ ದೇವಾಲಯಗಳಲ್ಲಿ ಪೂಜೆ ಮಾಡುವ ಅರ್ಚಕರಿಗೆ ಹಾಗೂ ಗುರುದ್ವಾರಗಳಲ್ಲಿ ಪೂಜೆ ಮಾಡುವ ಪೂಜಾರಿಗಳಿಗೆ ಗ್ರಂಥಿ ಸಮ್ಮಾನ್ ಯೋಜನೆಯ ಹೆಸರಿನಲ್ಲಿ ಸಹಾಯಧನದ ಭರವಸೆ ನೀಡಿದ್ದಾರೆ.