SUDDIKSHANA KANNADA NEWS/ DAVANAGERE/ DATE:07-02-2025
ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಎಂ. ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ, ಆದೇಶ ಹೊರಡಿಸಿದ್ದು, ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೈಕೋರ್ಟ್ ಜಾಮೀನು ಅಷ್ಟೇ ನೀಡಿದೆ ಹೊರತು ಪ್ರಕರಣ ರದ್ದುಪಡಿಸಿಲ್ಲ. ಹಾಗಾಗಿ, ಯಡಿಯೂರಪ್ಪ ಕಾನೂನು ಹೋರಾಟ ನಡೆಸಬೇಕಾಗಿದೆ.
2024ರ ಮಾರ್ಚ್ 3 ರಂದು ಯಡಿಯೂರಪ್ಪ ಅವರ ವಿರುದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಠಾಣೆಗೆ ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.