ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನೀರಾವರಿ ವಿಚಾರದಲ್ಲಿ ಕರ್ನಾಟಕಕ್ಕೆ: ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರಿಗೆ ಸಿಎಂ ಸಿದ್ದು ಗುದ್ದು!

On: February 16, 2025 11:32 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-02-2025

ಬೆಂಗಳೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ ಎಂದಿದ್ದಾರೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ.

ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ ಎಂದು ಹೇಳಿದ್ದಾರೆ.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

 

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment