Site icon Kannada News-suddikshana

ಉಚಿತ ಫಾಸ್ಟ್ ಫುಡ್ ತರಬೇತಿಗಾಗಿ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE_09-07_2025

ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉಚಿತ ಫಾಸ್ಟ್ ಫುಡ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 21 ರಿಂದ 12 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ಮತ್ತು ಕೌಶಲ್ಯದ ಜೊತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಾಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ.

ಅರ್ಹತೆಗಳು:

ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ, ಸಂಬAಧಿತ ವಿಷಯದಲ್ಲಿ ಇರುವ ಪ್ರಾಥಮಿಕ ಜ್ಞಾನ, ಅನುಭವ ಮುಂತಾದ ಮಾಹಿತಿಯೊಂದಿಗೆ ಬಿಳಿ ಹಾಳೆಯ ಮೇಲೆ ಅರ್ಜಿಯನ್ನು ಬರೆದು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರದೊಂದಿಗೆ ರೇಷನ್ ಕಾರ್ಡ್ ಒಂದು ಝೆರಾಕ್ಸ್ ಪ್ರತಿ ಲಗತ್ತಿಸಿ ಅರ್ಜಿಯನ್ನು ಜು.18 ರೊಳಗಾಗಿ ಸಲ್ಲಿಸಬೇಕು.

ಅರ್ಜಿಗಳು ನಮಗೆ ತಲುಪಿದ ನಂತರ ತರಬೇತಿಯಲ್ಲಿ ಭಾಗವಹಿಸುವ ಬಗೆಗೆ ಅರ್ಜಿಯಲ್ಲಿ ನಮೂದಿಸಿದ ಫೋನ್ ನಂಬರ್‌ಗೆ ಫೋನ್ ಮಾಡಿ ತಿಳಿಸಲಾಗುವುದು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಡಿಐಸಿ ಕಾಂಪೌಂಡ್‌ನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರ ಕಚೇರಿ ಅಥವಾ ಮೊ.9008464120, 9980123603 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Exit mobile version