SUDDIKSHANA KANNADA NEWS/ DAVANAGERE/ DATE:18-10-2023
ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ (Gas cylinder) ವಿತರಣೆ ಮಾಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ:
Bhadra Dam: ಭದ್ರಾಡ್ಯಾಂ ನೀರು ನಿಲುಗಡೆಗೆ ಆಕ್ರೋಶ:,ರೈತರ ಹಿಸಾಸಕ್ತಿ ಮರೆತ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು: ಭಾರತೀಯ ರೈತ ಒಕ್ಕೂಟ ಆರೋಪ
ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್.ಪಿ.ಜಿ ವಿತರಕ ಕಂಪನಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆಯಬಹುದು ಮತ್ತು ಕ್ಯೂ.ಆರ್.ಕೋಡ್ ಮೂಲಕ ಯೋಜನೆ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
ನನ್ನ ಮಣ್ಣು, ನನ್ನ ದೇಶ: ಅಮೃತ ಕಳಶ ಪಾದಯಾತ್ರೆ:
ದಾವಣಗೆರೆ ಜಿಲ್ಲಾ ಪಂಚಾಯತ್ ಜಿಲ್ಲಾ ನೆಹರು ಯುವ ಕೇಂದ್ರ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ನನ್ನ ಮಣ್ಣು, ನನ್ನ ದೇಶ ಎಂಬ ಶೀರ್ಷಿಕೆಯಡಿ ಅಮೃತ ಕಳಶ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಬಿ.ಎಸ್ ಚನ್ನಬಸಪ್ಪ ಕಾಲೇಜಿನ ಎನ್.ಎಸ್.ಎಸ್ ಘಟಕ ವಿದ್ಯಾರ್ಥಿಗಳಿಂದ ಮಣ್ಣನ್ನು ಸಂಗ್ರಹಿಸಿ ಅಮೃತ ಕಳಶ ಪಾದಯಾತ್ರೆ ಮೂಲಕ ಜಿಲ್ಲಾ ಪಂಚಾಯತ್ ಕಾರ್ಯಾಲಯ ತಲುಪಿ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ನೀಡಿ, ಅಂದೇ ಕಳಶವನ್ನು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಯುವದಳದ ಕಾರ್ಯಕರ್ತರಿಗೆ ಹಸ್ತಾಂತರಿಸಲಾಗುತ್ತದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಭುಕ್ಯಾ ಸಂಜೀವ ತಿಳಿಸಿದ್ದಾರೆ.