Home ದಾವಣಗೆರೆ ದಾವಣಗೆರೆ ಯುವಕ-ಯುವತಿಯರಿಗೆ ಸುವರ್ಣಾವಕಾಶ: ಜಿಟಿಟಿಸಿಯಿಂದ ಉಚಿತ ತಂತ್ರಜ್ಞಾನ ತರಬೇತಿ, ಸ್ಟೈಫಂಡ್ ಜೊತೆಗೆ ಉದ್ಯೋಗಾವಕಾಶ!
ದಾವಣಗೆರೆಉದ್ಯೋಗ ವಾರ್ತೆಬೆಂಗಳೂರು

ದಾವಣಗೆರೆ ಯುವಕ-ಯುವತಿಯರಿಗೆ ಸುವರ್ಣಾವಕಾಶ: ಜಿಟಿಟಿಸಿಯಿಂದ ಉಚಿತ ತಂತ್ರಜ್ಞಾನ ತರಬೇತಿ, ಸ್ಟೈಫಂಡ್ ಜೊತೆಗೆ ಉದ್ಯೋಗಾವಕಾಶ!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (GTTC) ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ನಿರುದ್ಯೋಗಿ ಯುವಕ, ಯುವತಿಯರಿಗಾಗಿ ವಿವಿಧ ತಾಂತ್ರಿಕ ಕೋರ್ಸ್‌ಗಳಲ್ಲಿ ಉಚಿತ ಅಲ್ಪಾವಧಿ ತರಬೇತಿಯನ್ನು ಹಮ್ಮಿಕೊಂಡಿದೆ.

16 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ ಹಾಗೂ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆಯಬಹುದು. ಸಿಎನ್‌ಸಿ ಪ್ರೋಗ್ರಾಮರ್, ಮಿಲ್ಲಿಂಗ್ ಮಷಿನ್ ಅಪರೇಟರ್, ಡಿಸೈನ್ ಹಾಗೂ ಪ್ರೊಡಕ್ಷನ್ ಇಂಜಿನಿಯರಿಂಗ್ ಸೇರಿದಂತೆ ಹಲವು ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಉಚಿತವಾಗಿ ಕಲಿಸಲಾಗುತ್ತದೆ.

ವಿಶೇಷವೆಂದರೆ, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಶಿಷ್ಯವೇತನ (Stipend) ನೀಡಲಾಗುತ್ತದೆ ಹಾಗೂ ಕೋರ್ಸ್ ಮುಗಿದ ನಂತರ ಉದ್ಯೋಗಾವಕಾಶಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.

Share

Leave a comment

Leave a Reply

Your email address will not be published. Required fields are marked *