Site icon Kannada News-suddikshana

ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಜರ್ನಲಿಸಂ ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು: ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ಸಂಸ್ಥೆಯು ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಉಚಿತ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ.

ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ; ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್‌ಶಿಪ್ ಸಿಗಲಿದೆ. ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕ್ರಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ.

ಬೆಂಗಳೂರಿನ ಕನಕಪುರ ರಸ್ತೆಯ ಬಂಜಾರಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ರೆಸಿಡೆನ್ಷಿಯಲ್ ಕೋರ್ಸ್ ನಡೆಯಲಿದೆ. ಅರ್ಜಿ ಸಲ್ಲಿಸಲು ಜು.15 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ 9945065060, 7899769899 ಸಂಪರ್ಕಿಸಬಹುದು.

Exit mobile version