Site icon Kannada News-suddikshana

Davanagere: ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:26-09-2023

ದಾವಣಗೆರೆ (Davanagere): ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

Davanagere: ವಿನೋಬನಗರದ ಗಣೇಶ ಮೆರವಣಿಗೆ ಸೂಪರ್: ಟ್ರ್ಯಾಕ್ಟರ್ ಓಡಿಸಿ ಗಮನ ಸೆಳೆದ ಸಚಿವ ಎಸ್ ಎಸ್ ಎಂ…!

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

Exit mobile version