Home ದಾವಣಗೆರೆ 31 ದಿನಗಳ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ: ಯುವತಿಯರು, ಮಹಿಳೆಯರಿಗೆ ಸುವರ್ಣ ಅವಕಾಶ!
ದಾವಣಗೆರೆಉದ್ಯೋಗ ವಾರ್ತೆಬೆಂಗಳೂರು

31 ದಿನಗಳ ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ: ಯುವತಿಯರು, ಮಹಿಳೆಯರಿಗೆ ಸುವರ್ಣ ಅವಕಾಶ!

Share
ಯುವತಿ
Share

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಯುವತಿಯರು ಮತ್ತು ಮಹಿಳೆಯರಿಗೆ ಟೈಲರಿಂಗ್ ತರಬೇತಿ ಕುರಿತು 31 ದಿನಗಳ ಉಚಿತ ತರಬೇತಿಯನ್ನು  ಸೆ.17 ರಿಂದ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.  ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9241482541, 9481506564 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಗಿರಿಧರ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *