SUDDIKSHANA KANNADA NEWS/ DAVANAGERE/ DATE:04-01-2025
ದಾವಣಗೆರೆ: ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ (ಸಿಪೆಟ್), ಮೈಸೂರಿನಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ವೃತಿಪರ ಯೋಜನೆಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
8ನೇ ತರಗತಿ, 10ನೇ ತರಗತಿ, ಪಿಯುಸಿ, ಜೆಒಸಿ, ಡಿಪ್ಲೋಮಾ, ಬಿ.ಇ, ಯಾವುದೇ ಡಿಗ್ರಿ(ಫಾಸ್, ಫೇಲ್) ವಿದ್ಯಾರ್ಹತೆ ಹೊಂದಿರುವವರಿಗೆ 3 ರಿಂದ 6 ತಿಂಗಳ ಅವಧಿಯ ತರಬೇತಿ ಕಾರ್ಯಕ್ರಮವನ್ನು ಉಚಿತ ಊಟ, ವಸತಿಯೊಂದಿಗೆ ನೀಡಲಾಗುವುದು.
ಅಭ್ಯರ್ಥಿಗಳಿಗೆ ತರಬೇತಿಗನುಸಾರ ಮಾಸಿಕ 500 ರಿಂದ 1000 ರೂಪಾಯಿಗಳವರೆಗೆ ಶಿಷ್ಯವೇತನ ನೀಡಲಾಗುವುದು. ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮೂಲ ದಾಖಲೆಗಳು ಮತ್ತು 6 ಪಾಸ್‍ಪೋರ್ಟ್ ಅಳತೆಯ ಫೋಟೋಗಳೊಂದಿಗೆ ನೇರವಾಗಿ ಬಂದು ದಾಖಲಾತಿ ಪಡೆಯುವುದರ ಮೂಲಕ ಉಚಿತ ತರಬೇತಿಯ ಸದುಪಯೋಗ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಸೆಂಟ್ರಲ್ ಇನ್ಸಿಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, 437, ಹೆಬ್ಬಾಳು ಕೈಗಾರಿಕಾ ಪ್ರದೇಶ, ಮೈಸೂರು -570 016. ದೂ.ಸಂ:9380756024, 7899669920, 08212510619 ಸಂಪರ್ಕಿಸಲು ವ್ಯವಸ್ಥಾಪಕರು ತಿಳಿಸಿದ್ದಾರೆ.