(Ganga Kalyana) ಗಂಗಾಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಪಡೆಯಲು ಸೆ. 15ರ ವರೆಗೆ ದಿನಾಂಕ ವಿಸ್ತರಿಸಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ.
(Ganga Kalyana) ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:

- ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
- ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.
- ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
- ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
- ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.
- ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.(Ganga Kalyana) ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
- ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸ್ವಂತ ಜಮೀನಿನ ಪಹಣಿ
- ಅರ್ಜಿದಾರರ ಭಾವಚಿತ್ರ
- ಬಿಪಿಎಲ್ ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸಬಹುದು.