SUDDIKSHANA KANNADA NEWS/ DAVANAGERE/ DATE:14-03-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ಗಾಯತ್ರಿ ಸಿದ್ದೇಶ್ವರ ಅವರು ಸಿರಿಗೆರೆಯ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಪುತ್ರ ಅನಿತ್ ಕುಮಾರ್ ಹಾಗೂ ಪುತ್ರಿ ಅಶ್ವಿನಿ ಶ್ರೀನಿವಾಸ್ ಜೊತೆ ತೆರಳಿ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಅವರ ಪುತ್ರ ಹಾಗೂ ಯುವ ಮುಖಂಡ ಅನಿತ್ಕುಮಾರ್ ಜಿ.ಎಸ್., ಪುತ್ರಿ ಅಶ್ವಿನಿ ಶ್ರೀನಿವಾಸ್ ಉಪಸ್ಥಿತರಿದ್ದರು.
ಚುನಾವಣಾ ಕಾರ್ಯಾಲಯ ಉದ್ಘಾಟನೆ, ರಿಪೋರ್ಟ್ ಕಾರ್ಡ್ ಬಿಡುಗಡೆ:
ದಾವಣಗೆರೆ ನಗರದ ಪಿ.ಬಿ. ರಸ್ತೆಯ ಅರುಣಾ ಟಾಕೀಸ್ ಮುಂಭಾಗದ ವಾಣಿ ಹೊಂಡ ಹಳೇ ಶೋ ರೂಂ ಆವರಣದಲ್ಲಿ ಮಾ. 15ಕ್ಕೆ ಬೆಳಿಗ್ಗೆ 11 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ನೇತೃತ್ವ ವಹಿಸಿದ ಮೇಲೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಲೋಕಸಭಾ ಸದಸ್ಯ ಡಾ. ಜಿ.ಎಂ. ಸಿದ್ದೇಶ್ವರರವರು ಯಾವೆಲ್ಲಾ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಎಷ್ಟೆಲ್ಲಾ ಯೋಜನೆಗಳನ್ನು ಲೋಕಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿದ್ದಾರೆ ಎನ್ನುವ ಸಮಗ್ರ ಮಾಹಿತಿಯುಳ್ಳ ಸಾಧನೆಯ ಪರ್ವ “ರಿಪೋರ್ಟ್ ಕಾರ್ಡ್” ಬಿಡುಗಡೆ ಮಾಡಲಾಗುವುದು.
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ರಿಪೋರ್ಟ್ ಕಾರ್ಡ್ ಬಿಡುಗಡೆಯನ್ನು ವಿಪಕ್ಷ ನಾಯಕ ಆರ್. ಅಶೋಕ್ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್, ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಉಸ್ತುವಾರಿ ಭೈರತಿ ಬಸವರಾಜ್, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಕೆ. ಎಸ್. ನವೀನ್ ಉಪಸ್ಥಿತರಿರುವರು.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ
ಸಂಸದ ಜಿ. ಎಂ. ಸಿದ್ದೇಶ್ವರ ಮನವಿ ಮಾಡಿದ್ದಾರೆ.