SUDDIKSHANA KANNADA NEWS/ DAVANAGERE/ DATE:23-09-2024
ದಾವಣಗೆರೆ: ದೂಡಾ ಮಾಜಿ ಅಧ್ಯಕ್ಷ, ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ಕುಸ್ತಿಪಟು, ವಾಲ್ಮೀಕಿ ಸಮಾಜದ ನಾಯಕರಾದ ಟಿ. ದಾಸಕರಿಯಪ್ಪ ನಿಧನಕ್ಕೆ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಮೃತದೇಹದ ಅಂತಿಮ ದರ್ಶನ ಪಡೆದ ವಿನಯ್ ಕುಮಾರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸ್ವಾಭಿಮಾನಿ ಬಳಗದ ಸಹ ಸದಸ್ಯರೊಂದಿಗೆ ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದರಲ್ಲದೇ. ದುಃಖತಪ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ. ಹೆಚ್. ಪಟೇಲ್, ಮಾಜಿ ಸಚಿವರಾದ ಪಿಜಿಆರ್ ಸಿಂಧ್ಯಾ ಎಂ. ಪಿ. ಪ್ರಕಾಶ್, ಮಾಜಿ ಶಾಸಕ ಕೆ. ಮಲ್ಲಪ್ಪ ಅವರ
ಜೊತೆ ಆಪ್ತ ಒಡನಾಟ ಹೊಂದಿದ್ದ ಟಿ. ದಾಸಕರಿಯಪ್ಪ ಅವರು ದಾವಣಗೆರೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ, ದೂಡಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಟಿ. ದಾಸರಿಯಪ್ಪರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ನೋವಿನಲ್ಲಿ ನಾನು ಭಾಗಿಯಾಗಿರುವೆ. ಅವರ ಕುಟುಂಬಸ್ಥರು, ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ವಿನಯ್ ಕುಮಾರ್ ಅವರು ಪ್ರಾರ್ಥಿಸಿದರು.