SUDDIKSHANA KANNADA NEWS/ DAVANAGERE/ DATE:03-03-2024
ದಾವಣಗೆರೆ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಇಂದಿನಿಂದ ಮಾರ್ಚ್ 6ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಪೋಷಕರು ನಿರ್ಲಕ್ಷ್ಯ ವಹಿಸಬಾರದು.
ಯಾವುದೇ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ.
ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಿದ್ಧತೆಯಲ್ಲಿ ಆಗಿದೆ. ಪ್ರಸಕ್ತ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೊಲಿಯೋ ನಿರ್ಮೂಲನೆಗೆ ಸಾರ್ವತ್ರಿಕ ಲಸಿಕಾಕರಣ ಬಹಳ ಪ್ರಮುಖ.
ಇಂದು ಜಿಲ್ಲೆಯ ಎಲ್ಲಾ ಲಸಿಕಾ ಬೂತ್ಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಲಸಿಕೆಯಯನ್ನು ಹಾಕಲಾಗುವುದು. ಮಾ.4 ರಿಂದ 6 ರವರೆಗೆ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಬೂತ್ನಲ್ಲಿ ಬಿಟ್ಟುಹೋದ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಲಾಗುವುದು. ಲಸಿಕೆ ಹಾಕಿಸಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹೆಚ್ಚು ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಲಸಿಕೆ ಹಾಕಲಾಗುತ್ತೆ…?
ಪೊಲಿಯೋ ಲಸಿಕೆ ಹಾಕಲು ನಗರ ಪ್ರದೇಶದಲ್ಲಿ 53764 ಹಾಗೂ ಗ್ರಾಮೀಣ ಭಾಗದಲ್ಲಿ 86372 ಮಕ್ಕಳು ಸೇರಿ 140136 ಮಕ್ಕಳಿಗೆ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಲಸಿಕೆಗಾಗಿ 1121 ಬೂತ್ಗಳು, 28 ಕಡೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು, 16 ಮೊಬೈಲ್ ಬೂತ್ಗಳನ್ನು ಸಿದ್ದಪಡಿಸಲಾಗಿದ್ದು 2245 ಲಸಿಕಾ ಕಾರ್ಯಕರ್ತರು ಮತ್ತು 219 ಮೇಲ್ವಿಚಾರಕರನ್ನು ಇದಕ್ಕಾಗಿ ನೇಮಿಸಲಾಗಿದೆ.
ತಾಯಂದಿರು ಹಾಗೂ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.