SUDDIKSHANA KANNADA NEWS/ DAVANAGERE/ DATE:01-11-2023
ದಾವಣಗೆರೆ: ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಜಿಲ್ಲಾಡಳಿತವು ದಾವಣಗೆರೆಯ ಗಾಜಿನ ಮನೆಯಲ್ಲಿ ನವೆಂಬರ್ ತಿಂಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ.
ಗಾಜಿನ ಮನೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮಗಳು ನಡೆಯಲಿದ್ದು ನವಂಬರ್ 1, 4, 5, 11, 19 ಹಾಗೂ 26 ರಂದು ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳು ಜರುಗಲಿವೆ. ಜಾನಪದ ಜಾದೂ, ಸಂಗೀತ, ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಸಾರ್ವಜನಿಕರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.