SUDDIKSHANA KANNADA NEWS/ DAVANAGERE/ DATE:18-03-2024
ದಾವಣಗೆರೆ: ರಾಜ್ಯಾದ್ಯಂತ ಗೋಬಿ ಮಂಚೂರಿ ಹಾಗೂ ಕಾಟನ್ಕ್ಯಾಂಡಿ ತಯಾರಿಕೆಯಲ್ಲಿ ಬಣ್ಣ ಮತ್ತು ರಾಸಾಯನಿಕ ಪದಾರ್ಥಗಳನ್ನು ಬಳಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುವ ಸಂಭವವಿರುವುದರಿಂದ ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಮತ್ತು ಹೋಟೇಲ್, ಬೇಕರಿಗಳಲ್ಲಿ ನಿಷೇಧಿತ ಬಣ್ಣ ಮತ್ತು ಕೃತಕ ರಾಸಾಯನಿಕಗಳನ್ನು ಬಳಸುವುದು ನಿಷೇಧಿಸಲಾಗಿದೆ.
ಆಹಾರದ ವ್ಯಾಪಾರಿಗಳು ಕಡ್ಡಾಯವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ನೊಂದಣಿ ಮಾಡಿಕೊಳ್ಳಬೇಕು. ನೊಂದಣಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಆಹಾರ ತಯಾರಿಕಾ ಎಲ್ಲಾ ವ್ಯಾಪಾರಿಗಳು ವಿವರಗಳನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಗೆ ಸಲ್ಲಿಸಲು ಸೂಚಿಸಿದೆ, ತಪ್ಪಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಅಂಕಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.