ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

On: October 14, 2025 6:21 PM
Follow Us:
ವ್ಯಾಪಾರಿ
---Advertisement---

SUDDIKSHANA KANNADA NEWS/DAVANAGERE/DATE:14_10_2025

ದಾವಣಗೆರೆ: ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಮತ್ತು ಅವರ ಶ್ರೇಯೋಭಿವೃದ್ಧಿ ಹಾಗೂ ಅವರ ವ್ಯಾಪಾರ, ವ್ಯವಹಾರ ಸುಧಾರಿಸುವ ನಿಟ್ಟಿನಲ್ಲಿ ಕಿರು ಸಾಲ, ಬಡ್ಡಿ ಸಹಾಯಧನ ಮತ್ತು ವಿವಿಧ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

READ ALSO THIS STORY: ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಸ್ಥರು ಮೂರು ಹಂತಗಳಲ್ಲಿ ಸಾಲ ಮತ್ತು ಬಡ್ಡಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ರೂ.15 ಸಾವಿರ, ರೂ.25 ಸಾವಿರ ಮತ್ತು ರೂ.50 ಸಾವಿರ ರೂಪಾಯಿ ಕ್ರಮವಾಗಿ ಮೂರು ಹಂತಗಳಲ್ಲಿ ಬ್ಯಾಂಕ್‍ಗಳ ಮೂಲಕ ಪಡೆಯಬಹುದಾಗಿದೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳು ವೆಬ್‍ಸೈಟ್ https://pmsvanidhi.mohua.gov.in/ ಈಗಾಗಲೇ ಖಾತೆ ಹೊಂದಿರುವ ಬ್ಯಾಂಕ್‍ಗಳನ್ನು ಆಯ್ಕೆ ಮಾಡಿಕೊಂಡು ಕೂಡಲೇ ಅರ್ಜಿ ಸಲ್ಲಿಸಲು ಸೂಚಿಸಿದೆ.

ಅದಷ್ಟೇ ಅಲ್ಲದೇ ಮೊದಲ ಎರಡು ಕಂತುಗಳಲ್ಲಿ ಸಾಲ ಪಡೆದು ನಿಯಮಿತವಾಗಿ ಮರುಪಾವತಿ ಮಾಡಿದ ಫಲಾನುಭವಿಗಳಿಗೆ ರೂ.30 ಸಾವಿರದವರೆಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲಾಗುತ್ತದೆ. ಆನ್‍ಲೈನ್ ಅಥವಾ ಡಿಜಿಟಲ್ ವ್ಯಾಪಾರ ನಡೆಸುವ ಚಿಲ್ಲರೆ ವಹಿವಾಟುಗಳಿಗೆ ರೂ.1200 ಮತ್ತು ಸಗಟು ವ್ಯಾಪಾರಿಗಳಿಗೆ ರೂ.400 ಕ್ಯಾಶ್ ಬ್ಯಾಕ್ ಸೌಲಭ್ಯ ಒದಗಿಸಲಾಗಿದೆ.

ಅರ್ಹ ಬೀದಿ ಬದಿ ವ್ಯಾಪಾರಸ್ಥರಿಗೆ ಪಿಎಂ ಸುರಕ್ಷಾ, ಪಿಎಂ ಜೀವನ್ ಜ್ಯೋತಿ ಭೀಮಾ ಯೋಜನೆ, ಪಿಎಂ ಶ್ರಮ ಯೋಗಿ ಮಾನಧನ್ ಯೋಜನೆ, ಒನ್ ನೇಷನ್, ಒನ್ ರೇಷನ್ ಕಾರ್ಡ್ ಸೇರಿದಂತೆ ವಿವಿಧ 8 ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯ ಅರ್ಹ ಬೀದಿ ಬದಿ ವ್ಯಾಪಾರಸ್ಥರ ಕಾರ್ಡ್ ಹೊಂದದೆ ಇರುವವರು, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ, ಹರಿಹರ ನಗರಸಭೆಯಲ್ಲಿ, ಮಲೆಬೆನ್ನೂರು ಚನ್ನಗಿರಿ ಮತ್ತು ಹೊನ್ನಾಳಿ ಪುರಸಭೆ ಹಾಗೂ ಜಗಳೂರು ನ್ಯಾಮತಿ ತಾಲ್ಲೂಕಿನ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಡ್ ಅಥವಾ ಪ್ರಮಾಣ ಪತ್ರ ಪಡೆಯಲು ಅವಕಾಶ ಕಲ್ಪಿಸಿದೆ. ಅರ್ಹ ಬೀದಿ ಬದಿ ವ್ಯಾಪಾರಿ ಫಲಾನುಭವಿಗಳು ಪಿಎಂ ಸ್ವ-ನಿಧಿ ಯೋಜನೆಯ ಸಂಪೂರ್ಣ ಸೌಲಭ್ಯವನ್ನು ಅದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment