SUDDIKSHANA KANNADA NEWS/ DAVANAGERE/ DATE:20-01-2025
ದಾವಣಗೆರೆ: ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿ ಇರುವುದರಿಂದ ಸಮಸ್ಯೆಯಾಗಿದೆ. ಇದನ್ನು ಆದಷ್ಟು ಬೇಗನೇ ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಭರ್ತಿಗೆ ಕ್ರಮವಹಿಸುವಂತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಜಿಲ್ಲಾಧಿಕಾರಿಗೆ ತಿಳಿಸಿದರು.
ಜಾಹೀರಾತು ಫಲಕದ ವಿವರ ನೀಡಲು ಸೂಚನೆ:
ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ರಸ್ತೆಯ ಡಿವೈಡರ್ ಗಳಲ್ಲಿ ಜಾಹಿರಾತು ಫಲಕಗಳನ್ನು ಅಳವಡಿಸಿದ್ದು ಇದರಿಂದ ಬರುವ ಆದಾಯ ಆಯಾ ಸ್ಥಳೀಯ ಸಂಸ್ಥೆಗಳಿಗೆ ಸೇರಬೇಕಾಗಿದೆ. ಆದರೆ ಇಲಾಖೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಪ್ರಸ್ತಾಪಿಸಿದಾಗ ಈ ಬಗ್ಗೆ ಸಮಗ್ರವಾದ ಮಾಹಿತಿ ಪಡೆದು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹರಿಹರ-ಶಿವಮೊಗ್ಗ ರಸ್ತೆ ಅಭಿವೃದ್ದಿಗೆ ಕ್ರಮ; ಮರಿಯಮ್ಮನಹಳ್ಳಿ-ಶಿವಮೊಗ್ಗ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಬೇಕೆಂದು ಮನವಿ ಮಾಡಿದ್ದು ಆದರೆ ಅನುಷ್ಟಾನವಾಗದ ಕಾರಣ ಹರಿಹರ- ಮಲೆಬೆನ್ನೂರು ರಸ್ತೆಯಲ್ಲಿ ಸಾಗುವುದೇ ಕಷ್ಟಕರವಾದ ಹಿನ್ನಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿಯೇ ರಸ್ತೆ ಅಭಿವೃದ್ದಿ ಅಥವಾ ದುರಸ್ಥಿಗೆ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಚನ್ನಗಿರಿ ಶಾಸಕರಾದ ಬಸವರಾಜ್ ವಿ.ಶಿವಗಂಗಾ, ಮೇಯರ್ ಚಮನ್ ಸಾಬ್.ಕೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ; ಶಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ; ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.